ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ ನೇಮಕಾತಿ 80 ಇಂಜಿನಿಯರ್ ಮತ್ತು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಫೆಬ್ರವರಿ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಇಂಜಿನಿಯರ್ ಮತ್ತು ಮೇಲ್ವಿಚಾರಕ |
| Organisation | ಭಾರತ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ |
| Educational Qualification | ಪದವಿ (ಸಿವಿಲ್ ಇಂಜಿನಿಯರಿಂಗ್)/ಸ್ನಾತಕೋತ್ತರ ಪದವಿ(೫ ವರ್ಷದ ಇಂಟಿಗ್ರೇಟೆಡ್ ಕೋರ್ಸ್)/ಡ್ಯುಯಲ್ ಪದವಿ(ಸಿವಿಲ್ ಇಂಜಿನಿಯರಿಂಗ್),ಡಿಪ್ಲೋಮಾ (ಸಿವಿಲ್ ಇಂಜಿನಿಯರಿಂಗ್) |
| Job Location | ಭಾರತದೆಲ್ಲೆಡೆ |
| Salary Scale | ಇಂಜಿನಿಯರ್ -62,100/-ರೂ ಮತ್ತು ಮೇಲ್ವಿಚಾರಕ - 34,680/-ರೂ |
| Application Start Date | February 6, 2019 |
| Application End Date | February 18, 2019 |
ವಿದ್ಯಾರ್ಹತೆ:
ಇಂಜಿನಿಯರ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಪದವಿಯನ್ನು ಮಾಡಿರಬೇಕು ಅಥವಾ 5 ವರ್ಷದ ಇಂಟಿಗ್ರೇಟೆಡ್ ಸ್ನಾತಕೋತ ಪದವಿಯನ್ನು ಮಾಡಿರಬೇಕು ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡ್ಯುಯಲ್ ಪದವಿ ಪ್ರೋಗ್ರಾಮ್ ಅನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾನಿಲಯದಲ್ಲಿ ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು ಶೇ60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶೇ50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಮೇಲ್ವಿಚಾರಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾನಿಲಯ/ ಸಂಸ್ಥೆಯಲ್ಲಿ ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು ಕನಿಷ್ಟ ಶೇ60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶೇ50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಇಂಜಿನಿಯರ್ | 21 |
| ಮೇಲ್ವಿಚಾರಕ | 59 |
| ಒಟ್ಟು | 80 |
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ 6,2019 ರ ಅನ್ವಯ 34 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವೇತನದ ವಿವರ:
ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 62,100/-ರೂ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 34,680/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿಯೊಂದಿಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಮತ್ತು ಇತರೆ ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











