ಬಿಹೆಚ್‌ಇಎಲ್ 56 ಅಪ್ರೆಂಟಿಸ್ ಹುದ್ದೆಗಳಿಗೆ ಡಿ.9ಕ್ಕೆ ನೇರ ಸಂದರ್ಶನ

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ 56 ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 9,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಯು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಹೆಚ್‌ಇಎಲ್‌ ನಲ್ಲಿ 56 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್
Organisation ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್
Educational Qualification ಇಂಜಿನಿಯರಿಂಗ್‌ ಪದವಿ/ಬಿ.ಇ ಅಥವಾ ಬಿ.ಟೆಕ್ ಮತ್ತು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ಗ್ರಾಜುಯೇಟ್ ಅಪ್ರೆಂಟಿಸ್- ತಿಂಗಳಿಗೆ 9,000/-ರೂ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ -ತಿಂಗಳಿಗೆ 8,000/-ರೂ
Application Start Date November 30, 2019
Application End Date December 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್‌ ನಲ್ಲಿ ಪದವಿ/ಬಿ.ಇ ಅಥವಾ ಬಿ.ಟೆಕ್ ಮತ್ತು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಡಿಸೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಪರಿ‍ಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

ಸಂದರ್ಶನದ ವಿವರ:

ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಯು ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್‌ http://www.bhel.com/index.php/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಿ. ಅರ್ಹ ಅಭ್ಯರ್ಥಿಯು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 9,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಡಿಸೆಂಬರ್ 9,2019ರಂದು ಬೆಳಗ್ಗೆ 9 ಗಂಟೆಗೆ

ಸಂದರ್ಶನ ನಡೆಯುವ ಸ್ಥಳ:

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್,
ಇಲೆಕ್ಟ್ರಾನಿಕ್ಸ್ ವಿಭಾಗ,
ಮೈಸೂರು ರಸ್ತೆ,
ಬೆಂಗಳೂರು-560026.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BHEL recruitment 2019 notification has been released on official website for the recruitment of 56 graduate and technician apprentices posts. Interested candidates can attend walk-in interview on 9th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+