ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಹೆಚ್ಇಎಲ್) 120 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.