ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಹೆಚ್ಇಎಲ್) 30 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆಸಕ್ತರು ಜನವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿಗೆ ಜನವರಿ 23,2021ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿಯ ವಿಳಾಸವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.