ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 8,2022 ರಿಂದ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
BHEL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 8ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
BHEL ನೇಮಕಾತಿ 2022 ವಯೋಮಿತಿ :
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
BHEL ನೇಮಕಾತಿ 2022 ವೇತನದ ವಿವರ :
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 10,000/-ರೂಗಳ ವರೆಗೆ ಸ್ಟೈಫೆಂಡ್ ನೀಡಲಾಗುವುದು.
BHEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BHEL ನೇಮಕಾತಿ 2022 ಅರ್ಜಿ ಶುಲ್ಕ :
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BHEL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಹಾಕಬಹುದು.