Bidar District Court Recruitment 2021 : 21 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 12 ಶೀಘ್ರಲಿಪಿಗಾರ ಗ್ರೇಡ್ III ಮತ್ತು 9 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2021 ರಿಂದ ಅಕ್ಟೋಬರ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ 21 ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಶೀಘ್ರಲಿಪಿಗಾರ- 12 ಹುದ್ದೆಗಳು
ಬೆರಳಚ್ಚುಗಾರರು- 9 ಹುದ್ದೆಗಳು
ಒಟ್ಟು 21 ಹುದ್ದೆಗಳು

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಶೀಘ್ರಲಿಪಿಗಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಹಿರಿಯ ಶ್ರೇಣಿಯ ಬೆರಳಚ್ಚು ಅಥವಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:

ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್ III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಬೆರಳಚ್ಚುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/bidar-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan download ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ. ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಅಕ್ಟೋಬರ್ 12,2021ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬೀದರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/bidar-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 9,2021ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bidar district court recruitment 2021 notification has been released for 21 stenographer and typist posts. Interested candidates can apply through online before October 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X