BMRCL Recruitment 2020: ವಿವಿಧ 3 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 3 ಚೀಫ್ ಆರ್ಕಿಟೆಕ್ಟ್, ಜನರಲ್ ಮ್ಯಾನೇಜರ್ ಮತ್ತು ಚೀಫ್ ಸೇಫ್ಟಿ ಹೆಲ್ತ್ ಮತ್ತು ಎನ್ವಿರಾನ್ಮೆಂಟ್ ಎಕ್ಸ್‌ಪರ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಆಗಸ್ಟ್ 20,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಉದ್ಯೋಗಗಳಿವೆ..ಆ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿಎಂಆರ್ ಸಿಎಲ್ ನೇಮಕಾತಿಯ ಹುದ್ದೆಗಳಿಗೆ ಬಿ.ಇ / ಬಿ.ಟೆಕ್, ಎಂ.ಇ/ಎಂ.ಟೆಕ್, ಪದವಿ, ಎಂ.ಎಸ್ಸಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,25,000/- ರಿಂದ 2,25,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಬಿಎಂಆರ್ ಸಿಎಲ್ ನ ಅಧಿಕೃತ ವೆಬ್‌ಸೈಟ್ https://kannada.bmrc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ ನಂತರ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 20,2020ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
ಜನರಲ್ ಮ್ಯಾನೇಜರ್,
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ,
೩ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್.ರಸ್ತೆ,
ಶಾಂತಿನಗರ, ಬೆಂಗಳೂರು-560027.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BMRCL recruitment 2020 notification has been released for the recruitment of 3 various posts. Candidates can apply before August 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+