ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) 37 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್, ಸುಬೇದಾರ್ ಅಥವಾ ವಾಯುಪಡೆ ಮತ್ತು ಕೇಂದ್ರ ಪೊಲೀಸ್ ಸಶಸ್ತ್ರ ಪಡೆಗಳಲ್ಲಿ ನಿವೃತ್ತ ಹೊಂದಿರುವ ಅಭ್ಯರ್ಥಿಗಳಿಂದ ಅಥವಾ ಅನುಭವಿಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದ್ದು, ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 18,2021 ರಿಂದ ಪ್ರಾರಂಭವಾಗಿ ನವೆಂಬರ್ 17,2021 ರ ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ.

ಬಿಎಂಆರ್‌ಸಿಎಲ್ ನೇಮಕಾತಿ 2021 ವಿದ್ಯಾರ್ಹತೆ :
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭದ್ರತಾ ಕ್ಷೇತ್ರಗಳಲ್ಲಿ ಅನುಭವ ಅಥವಾ ನಿವೃತ್ತಿ ಹೊಂದಿರಬೇಕು. ಕರ್ನಾಟಕ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್, ಸುಬೇದಾರ್ ಅಥವಾ ವಾಯುಪಡೆ ಮತ್ತು ಕೇಂದ್ರ ಪೊಲೀಸ್ ಸಶಸ್ತ್ರ ಪಡೆಗಳಲ್ಲಿ ಕೆಲಸ ಮಾಡಿದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬಿಎಂಆರ್‌ಸಿಎಲ್ ನೇಮಕಾತಿ 2021 ವಯೋಮಿತಿ :
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಟ 62 ವರ್ಷ ವಯೋಮಿತಿಯೊಳಗಿರಬೇಕು.

ಬಿಎಂಆರ್‌ಸಿಎಲ್ ನೇಮಕಾತಿ 2021 ವೇತನ :
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತದನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂಗಳ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.

ಬಿಇಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಬಿಎಂಆರ್‌ಸಿಎಲ್ ನೇಮಕಾತಿ 2021 ಅರ್ಜಿ ಶುಲ್ಕ :
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ಅಧಿಸೂಚನೆಯನ್ನು ಓದಬಹುದು.

ಬಿಎಂಆರ್‌ಸಿಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 17,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex,
K.H. Road, Shanthinagar,
Bangalore- 560027.
ಬಿಎಂಆರ್‌ಸಿಎಲ್ ನೇಮಕಾತಿ ೨೦೨೧ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.