ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್ಸಿಎಲ್) 6 ಚೀಫ್ ಇಂಜಿನಿಯರ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಚೀಫ್ ಇಂಜಿನಿಯರ್, ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,300/- ರಿಂದ 73,000/-ರೂ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,100/- ರಿಂದ 54,500/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 22,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
General manager,
Bangalore metro rail corporation limited,
III floor, BMTC complex, K.H. Road,
Shantinagar,
Bengaluru 560027.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.