BMRCL Recruitment 2021: ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್ಸಿಎಲ್) 3 ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 18,2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ...ಫೆ.18ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಎಸ್ಸಿ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನ:

ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 18,2021ರಂದು ಬೆಳಿಗ್ಗೆ 10 ಗಂಟೆಗೆ ಬಿಎಂಆರ್‌ಸಿಎಲ್ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:

BMRCL Head Office,
3rd Floor,
BMTC Complex,
K.H. Road,
Shantinagar,
Bengaluru-560027.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BMRCL recruitment 2021 notification has been released for 3 assistant manager, assistant engineer and section engineer posts. Interested candidates can attend walk in interview on February 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X