ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಬಿಎನ್‌ಯು) ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಸೆಪ್ಟೆಂಬರ್ 8,2021ರೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಎಂ.ಫಿಲ್, ಪಿಹೆಚ್.ಡಿ, ಎನ್‌ಇಟಿ ಮತ್ತು ಎಸ್‌ಎಲ್‌ಇಟಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಬಿಎನ್‌ಯು) ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಬಿಎನ್‌ಯು) ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಧಿಕೃತ ವೆಬ್‌ಸೈಟ್ https://eng.bnu.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 8,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
ಕುಲಸಚಿವರು,
ವಿಶ್ವವಿದ್ಯಾಲಯದ ಆಡಳಿತ ಕಛೇರಿ,
ಶ್ರೀ ದೇವರಾಜ ಅರಸು ಬಡಾವಣೆ,
ಟಮಕ,
ಕೋಲಾರ-563 103.
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
