ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಮ್ಯಾನೇಜರ್ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಮ್ಯಾನೇಜರ್ ಮತ್ತು ಅಧಿಕಾರಿ |
| Organisation | ಬ್ಯಾಂಕ್ ಆಫ್ ಬರೋಡ ಫಿನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ (ಬಿಓಬಿ ಫಿನಾನ್ಷಿಯಲ್) |
| Educational Qualification | ಪದವಿ |
| Job Location | ಮುಂಬೈ, ಭಾರತದೆಲ್ಲೆಡೆ |
| Salary Scale | ಹುದ್ದೆಗಳಿಗನುಸಾರ |
| Application Start Date | May 22, 2019 |
| Application End Date | June 12, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.bobfinancial.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು
ಆನ್‌ಲೈನ್ ನಲ್ಲಿ ಬಿಓಬಿ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳ ಬಗೆಗಿನ ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











