
ಬ್ಯಾಂಕ್ ಆಫ್ ಬರೋಡಾದಲ್ಲಿ 512 ಚೀಫ್ ಎಕನಾಮಿಸ್ಟ್, ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಕನಿಷ್ಟ 23 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ.ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಶುಲ್ಕ:
ಓಬಿಸಿ, ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಮತ್ತು ಪ.ಜಾ/ಪ,ಪಂ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ/ಗುಂಪು ಚರ್ಚೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/index.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











