BOI Recruitment 2022 : 696 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 696 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 26,2022 ರಿಂದ ಮೇ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬ್ಯಾಂಕ್ ಆಫ್ ಇಂಡಿಯಾದಲ್ಲಿ 696 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಸಿಎ/ಐಸಿಡಬ್ಲ್ಯೂಎ, ಡಿಪ್ಲೋಮಾ, ಎಂಬಿಎ, ಬಿ.ಇ/ಬಿ.ಟೆಕ್, ಪಿಜಿಡಿಎಂ, ಎಂಸಿಎ, ಎಂ.ಎಸ್ಸಿ, ಬಿಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 28 ರಿಂದ ಗರಿಷ್ಟ 38 ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಬ್ಯಾಂಕ್ ಆಫ್ ಇಂಡಿಯಾದಲ್ಲಿ 696 ಹುದ್ದೆಗಳ ನೇಮಕಾತಿ

ವೇತನ :

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ :

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bankofindia.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 26,2022 ರಿಂದ ಮೇ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bank of india (BOI) recruitment 2022 notification released 696 officer posts. Interested candidates can apply before May 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+