ಭಾರತೀಯ ಪಶುಪಾಲನಾ ನಿಗಮ ನಿಯಮಿತ (ಬಿಪಿಎನ್ಎಲ್) 3216 ಮಾರಾಟ ವ್ಯವಸ್ಥಾಪಕ, ಮಾರಾಟ ಅಭಿವೃದ್ಧಿ ಅಧಿಕಾರಿ ಮತ್ತು ಮಾರಾಟ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪದವಿ, 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಮಾರಾಟ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ಹಾಗೂ ಮಾರಾಟ ಅಭಿವೃದ್ಧಿ ಮತ್ತು ಮಾರಾಟ ಸಹಾಯಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಮಾರಾಟ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000/-ರೂ, ಮಾರಾಟ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18000/-ರೂ ಮತ್ತು ಮಾರಾಟ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತರು ಆನ್‌ಲೈನ್ ನಲ್ಲಿ ಭಾರತೀಯ ಪಶುಪಾಲನಾ ನಿಗಮ ನಿಯಮಿತ (ಬಿಪಿಎನ್ಎಲ್) ಅಧಿಕೃತ ವೆಬ್‌ಸೈಟ್
https://www.bharatiyapashupalan.com/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











