ಭಾರತೀಯ ಪಶುಪಾಲನ್ ನಿಗಮ ನಿಯಮಿತದಲ್ಲಿ 747 ವಿವಿಧ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 20,2022 ರಿಂದ ಮೇ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಪಶುಪಾಲನ್ ನಿಗಮ ನಿಯಮಿತ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, 12ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ :
ಭಾರತೀಯ ಪಶುಪಾಲನ್ ನಿಗಮ ನಿಯಮಿತ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಭಾರತೀಯ ಪಶುಪಾಲನ್ ನಿಗಮ ನಿಯಮಿತ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :
ಭಾರತೀಯ ಪಶುಪಾಲನ್ ನಿಗಮ ನಿಯಮಿತ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಭಾರತೀಯ ಪಶುಪಾಲನ್ ನಿಗಮ ನಿಯಮಿತ ನೇಮಕಾತಿಯ ಸ್ಥಳೀಯ ವ್ಯವಸ್ಥಾಪಕ ಹುದ್ದೆಗಳಿಗೆ 944/-ರೂ, ಜಿಲ್ಲಾ ವ್ಯವಸ್ಥಾಪಕ ಹುದ್ದೆಗಳಿಗೆ 826/-ರೂ, ಟೆಹ್ಸಿಲ್ ವ್ಯವಸ್ಥಾಪಕ ಹುದ್ದೆಗಳಿಗೆ 708/-ರೂ, ಎಕ್ಸಿಕ್ಯುಟಿವ್ ಮ್ಯಾನೇಜರ್ ಹುದ್ದೆಗಳಿಗೆ 826/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ :
ಭಾರತೀಯ ಪಶುಪಾಲನ್ ನಿಗಮ ನಿಯಮಿತ ನೇಮಕಾತಿಯ ವಿವಿಧ ವ್ಯವಸ್ಥಾಪಕ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://bharatiyapashupalan.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 20,2022 ರಿಂದ ಮೇ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.