BRBNMPL: 3 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (ಬಿಆರ್‌ಬಿಎನ್‌ಎಂಪಿಎಲ್) 3 ಭದ್ರತಾ ವ್ಯವಸ್ಥಾಪಕರು ಮತ್ತು ಸಹಾಯಕ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಫೆಬ್ರವರಿ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ..ಫೆ.28ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಭದ್ರತಾ ವ್ಯವಸ್ಥಾಪಕರು ಮತ್ತು ಸಹಾಯಕ ವ್ಯವಸ್ಥಾಪಕರು
Organisation ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (ಬಿಆರ್‌ಬಿಎನ್‌ಎಂಪಿಎಲ್)
Job Location ಭಾರತದೆಲ್ಲೆಡೆ
Salary Scale ಭದ್ರತಾ ವ್ಯವಸ್ಥಾಪಕರು- ತಿಂಗಳಿಗೆ 81,549/-ರೂ ಮತ್ತು ಸಹಾಯಕ ವ್ಯವಸ್ಥಾಪಕರು -ತಿಂಗಳಿಗೆ 65,637/-ರೂ
Application Start Date January 23, 2020
Application End Date February 28, 2020

ವಿದ್ಯಾರ್ಹತೆ:

ವ್ಯವಸ್ಥಾಪಕ ಹುದ್ದೆಗಳಿಗನುಸಾರ ವಿದ್ಯಾರ್ಹತೆ ಮತ್ತು ಅಧಿಸೂಚನೆಯಲ್ಲಿ ಕೇಳಲಾಗಿರುವಂತೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜನವರಿ 31,2020ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ನೀಡಲಾಗಿರುವ ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (ಬಿಆರ್‌ಬಿಎನ್‌ಎಂಪಿಎಲ್) ನೇಮಕಾತಿಯ ಭದ್ರತಾ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 81,549/-ರೂ ಮತ್ತು ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,637/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ/ ಮಹಿಳಾ ಮತ್ತು ಸಿಬ್ಬಂದಿಯವರಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.brbnmpl.co.in/english/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿಕೊಂಡು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

The General Manager In Charge,
Bharatiya Reserve Bank Note Mudran Private Limited,
Corporate Office, No.3 & 4, I Stage, I Phase,
B.T.M. Layout, Bannerghatta Road
Post Box No. 2924, D.R. college P.O.,
Bengaluru-560 029.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Bharatiya reserve bank note mudran private limited (BRBNMPL) recruitment 2020 notification has been released on official website for the recruitment of 3 manager posts. Interested candidates can apply before 28th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X