BRO Recruitment 2021 : 354 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನಲ್ಲಿ 354 ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಡಿಸೆಂಬರ್ 4,2021 ರಿಂದ ಜನವರಿ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಿಆರ್‌ಒ ನಲ್ಲಿ 354 ವಿವಿಧ ಹುದ್ದೆಗಳ ನೇಮಕಾತಿ

BRO ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನೇಮಕಾತಿಯ ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಹುದ್ದೆಗಳಿಗೆ 10+2; ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BRO ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ವೆಹಿಕಲ್ ಮೆಕ್ಯಾನಿಕ್ -293 ಹುದ್ದೆಗಳು
ಮಲ್ಟಿಸ್ಕಿಲ್ಡ್ ವರ್ಕರ್‌ - 45 ಹುದ್ದೆಗಳು
ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ - 16 ಹುದ್ದೆಗಳು
ಒಟ್ಟು 354 ಹುದ್ದೆಗಳು

BRO ನೇಮಕಾತಿ 2021 ವಯೋಮಿತಿ :

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನೇಮಕಾತಿಯ ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BRO ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನೇಮಕಾತಿಯ ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BRO ನೇಮಕಾತಿ 2021 ವೇತನ :

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನೇಮಕಾತಿಯ ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 63,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BRO ನೇಮಕಾತಿ 2021 ಅರ್ಜಿ ಶುಲ್ಕ :

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನೇಮಕಾತಿಯ ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

BRO ನೇಮಕಾತಿ 2021 ಅರ್ಜಿ ಸಲ್ಲಿಕೆ:

ಬಾರ್ಡರ್ ರೋಡ್ಸ್‌ ಆರ್ಗನೈಜೇಶನ್ (ಬಿಆರ್‌ಒ) ನೇಮಕಾತಿಯ ಮಲ್ಟಿ ಸ್ಕಿಲ್ಡ್‌ ವರ್ಕರ್, ವೆಹಿಕಲ್ ಮೆಕ್ಯಾನಿಕ್ ಮತ್ತು ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ (ಒಜಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 4,2021 ರಿಂದ ಜನವರಿ 18,2022ರೊಳಗೆ ಕಚೇರಿಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು.

ಕಚೇರಿ ವಿಳಾಸ:
"Commandant GREF Centre, Dighi camp, Pune- 411 015"

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Border roads organisation (BRO) recruitment 2021 notification has been released for 354 various posts. Interested candidates can apply before january 18,2022.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X