BRO Recruitment 2021: 459 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಓ) 459 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ನಲ್ಲಿ ಉದ್ಯೋಗಾವಕಾಶ..ಏ.5ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

12ನೇ ತರಗತಿ, 10ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 18,000/- ರಿಂದ 92,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.bro.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
Commandant,
GREF CENTRE,
Doighi Camp,
Pune-411 015.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BRO recruitment 2021 notification has been released for 459 draughtsman and various posts. Interested candidates can apply before April 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+