ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ದಲ್ಲಿ ಇಂಟರ್ನ್ ಶಿಪ್ ಕಾರ್ಯಕ್ರಮದಡಿ ಕೆಲಸ ನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯ ನಿರ್ಣಾಯಕ ಸವಾಲುಗಳನ್ನು ಹೊಸಕಲ್ಪನೆ ಮತ್ತು ಶಕ್ತಿಯೊಂದಿಗೆ ಪರಿಹರಿಸಲು ಹಾಗೂ ಅಲ್ಪ ಕಾಲಾವಧಿಯಲ್ಲಿ ಹೊಸ ಪದವೀಧರರ ವೃತ್ತಿ ಕೌಶಲ್ಯವನ್ನು ಅನುಭವ ಕಲಿಕೆಯೊಂದಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾ್ರ್ಟ್ಸಿಟಿ ಯೋಜನೆಯಡಿಯಲ್ಲಿ TULIP ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ TULIP ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 11,2022 ರಿಂದ ಜನವರಿ 18,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
BSCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ನೇಮಕಾತಿಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
BSCL ನೇಮಕಾತಿ 2022 ವಯೋಮಿತಿ :
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ನೇಮಕಾತಿಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
BSCL ನೇಮಕಾತಿ 2022 ಸ್ಟೈಫೆಂಡ್ ವಿವರ :
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ನೇಮಕಾತಿಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,000/-ರೂ ಪ್ರೋತ್ಸಾಹ ವೇತನ ನೀಡಲಾಗುವುದು.
BSCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ನೇಮಕಾತಿಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೇಳಲಾಗಿರುವ ಅರ್ಹತೆಗಳ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BSCL ನೇಮಕಾತಿ 2022 ಅರ್ಜಿ ಶುಲ್ಕ :
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ನೇಮಕಾತಿಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BSCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ (BSCL) ನೇಮಕಾತಿಯ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://internship.aicte-india.org/register_new.php ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 18,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.