BSF Recruitment 2021 : 72 ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆಯಲ್ಲಿ ಬಿಎಸ್‌ಎಫ್ 72 ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಿಎಸ್‌ಎಫ್ ನಲ್ಲಿ 72 ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಮತ್ತು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 15,2021 ರಿಂದ ಡಿಸೆಂಬರ್ 29,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BSF ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಬಿಎಸ್‌ಎಫ್ ನಲ್ಲಿ 72 ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

BSF ನೇಮಕಾತಿ 2021 ವಿದ್ಯಾರ್ಹತೆ:

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿಯ ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ 10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ದೈಹಿಕ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಕೂಡ ಅರ್ಜಿ ಹಾಕಬಹುದು.

BSF ನೇಮಕಾತಿ 2021 ವಯೋಮಿತಿ :

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿಯ ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್ 29,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSF ನೇಮಕಾತಿ 2021 ವೇತನ:

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿಯ ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 92,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

BSF ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿಯ ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

BSF ನೇಮಕಾತಿ 2021 ಅರ್ಜಿ ಶುಲ್ಕ:

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿಯ ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಬಹುದು.

BSF ನೇಮಕಾತಿ 2021 ಅರ್ಜಿ ಸಲ್ಲಿಕೆ:

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನೇಮಕಾತಿಯ ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://rectt.bsf.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 15,2021 ರಿಂದ ಡಿಸೆಂಬರ್ 29,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಬಿಎಸ್‌ಎಫ್ ನೇಮಕಾತಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF group C recruitment 2021 notification has bee released for 7 group c engineer posts. Interested candidates can apply through online before December 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+