BSF: 317 ಹುದ್ದೆಗಳಿಗೆ ಅರ್ಜಿ ಆಹ್ವಾನ...ಮಾ.16 ರೊಳಗೆ ಅರ್ಜಿ ಹಾಕಿ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌) 317 ಎಸ್‌ಐ ಮತ್ತು ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಬೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬಿಎಸ್‌ಎಫ್‌ನಲ್ಲಿ ವಿವಿಧ 317 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಮಾರ್ಚ್ 16,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

CRITERIA DETAILS
Name Of The Posts ಗ್ರೂಪ್ ಬಿ ಮತ್ತು ಸಿ
Organisation ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌)
Educational Qualification 10ನೇತರಗತಿ/ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ; 12ನೇ ತರಗತಿ/ಇಂಟರ್‌ಮೀಡಿಯೇಟ್ / ತತ್ಸಮಾನ; ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,500/- ರಿಂದ 1,12,400/-ರೂ
Application Start Date February 15, 2020
Application End Date March 16, 2020

ಶೈಕ್ಷಣಿಕ ವಿದ್ಯಾರ್ಹತೆ:

ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ 10ನೇತರಗತಿ/ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ; 12ನೇ ತರಗತಿ/ಇಂಟರ್‌ಮೀಡಿಯೇಟ್ / ತತ್ಸಮಾನ; ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಎಸ್‌ಎಫ್‌ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 25,500/-ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಎಸ್‌ಐ ಹುದ್ದೆಗಳಿಗೆ 200/-ರೂ ಮತ್ತು ಎಚ್‌ಸಿ ಹಾಗೂ ಸಿಟಿ ಹುದ್ದೆಗಳಿಗೆ 100/-ರೂ ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಡಿಮ್ಯಾಂಡ್‌ಡ್ರಾಫ್ಟ್ /ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬಹುದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಬಿಎಸ್‌ಎಫ್‌ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://bsf.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಮಾರ್ಚ್ 16,2020ರೊಳಗೆ ಸಲ್ಲಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು. ಅಭ್ಯರ್ಥಿಗಳು ಕಚೇರಿಯ ವಿಳಾಸವನ್ನು ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2020 notification has been released on official website for the recruitment of 317 SI and technician posts. Interested candidates can apply before 16th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+