BSF Recruitment 2021 : 65 ಕಾನ್ಸ್‌ಟೇಬಲ್ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್) ನಲ್ಲಿ 65 ಅಸಿಸ್ಟೆಂಟ್ ಏರ್‌ಕ್ರಾಫ್ಟ್ ಮೆಕ್ಯಾನಿಕ್, ಅಸಿಸ್ಟೆಂಟ್ ರೇಡಿಯೋ ಮೆಕ್ಯಾನಿಕ್ ಮತ್ತು ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 26ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಬಿಎಸ್‌ಎಫ್‌ ನಲ್ಲಿ 65 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 92,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bsf.gov.in/Home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2021 notification has been released for 65 constable and various assistant posts. Interested candidates can apply before july 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+