ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ 254 ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ನವೆಂಬರ್ 4,2022 ರಿಂದ ಜನವರಿ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
BSF ನೇಮಕಾತಿ 2022 ವಿದ್ಯಾರ್ಹತೆ :
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಹತ್ತನೇ ತರಗತಿ, ಹತ್ತನೇ ತರಗತಿ ಜೊತೆಗೆ ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
BSF ನೇಮಕಾತಿ 2022 ವಯೋಮಿತಿ :
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ 52 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
BSF ನೇಮಕಾತಿ 2022 ವೇತನ :
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
ತಿಂಗಳಿಗೆ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BSF ನೇಮಕಾತಿ 2022 ಅರ್ಜಿ ಶುಲ್ಕ :
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BSF ನೇಮಕಾತಿ 2022 ಅರ್ಜಿ ಸಲ್ಲಿಕೆ :
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://bsf.gov.in/ ಗೆ ಭೇಟಿ ನೀಡಿ. ನಂತರ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 4,2022 ರಿಂದ ಜನವರಿ 3,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.