ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ದೇಶದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 25 ಹುದ್ದೆಗಳು ಖಾಲಿ ಇದ್ದು, ನ. 23, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಹುದ್ದೆಗಳ ವಿವರ
ಹುದ್ದೆ: ಮ್ಯಾನೇಜರ್ -20 ಹುದ್ದೆಗಳು
ವೇತನ ಶ್ರೇಣಿ: ರೂ.28000-43450/- ತಿಂಗಳಿಗೆ
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ಪದವಿ ಗಳಿಸಿರಬೇಕು. ಮೂರು ವರ್ಷ ಸೇವಾ ಅನುಭವ ಹೊಂದಿರಬೇಕು.
ವಯೋಮಿತಿ: 20 ರಿಂದ 30 ವರ್ಷದೊಳಗಿರಬೇಕು.
ಹುದ್ದೆ: ಸೀನಿಯರ್ ಮ್ಯಾನೇಜರ್-05 ಹುದ್ದೆಗಳು
ವೇತನ ಶ್ರೇಣಿ: ರೂ.33300-47770/- ತಿಂಗಳಿಗೆ
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಗಳಿಸಿರಬೇಕು.(ಎಂಬಿಎ/ಸಿಎ/ಐಸಿಡಬ್ಲ್ಯೂಎ/ಎಲ್ ಎಲ್ ಬಿ ಪದವೀಧರರಿಗೆ ಆಧ್ಯತೆ) ಆರು ವರ್ಷ ಸೇವಾ ಅನುಭವ ಹೊಂದಿರಬೇಕು.
ವಯೋಮಿತಿ: 28 ರಿಂದ 35 ವರ್ಷದೊಳಗಿರಬೇಕು.
ಆಯ್ಕೆ ವಿಧಾನ
ಮೆರಿಟ್ ಆಧಾರದ ಮೇಲೆ ಆಯ್ಕೆ ಪಟ್ಟಿ ಸಿದ್ದಪಡಿಸಿ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ
ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.100/-ನ್ನು ನೆಟ್ ಬ್ಯಾಂಕಿಂಗ್ ಅಥವಾ ನೆಫ್ಟ್ ಮೂಲಕ ಪಾವತಿಸಬಹುದಾಗಿದೆ.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-11-2017
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











