ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಆಯುರ್ವೇದಿಕ್ ಸೈನ್ಸ್ ನಲ್ಲಿ 66 ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಡಿಸೆಂಬರ್ 19,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಲೋಯರ್ ಡಿವಿಷನ್ ಕ್ಲರ್ಕ್ |
Organisation | ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಆಯುರ್ವೇದಿಕ್ ಸೈನ್ಸ್ |
Educational Qualification | ಪದವಿ,10+2/ದ್ವಿತೀಯ ಪಿಯುಸಿ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 5,200/- ರಿಂದ 20,200/-ರೂ |
Application Start Date | November 20, 2019 |
Application End Date | December 19, 2019 |
ವಿದ್ಯಾರ್ಹತೆ:
ಪದವಿ ಮತ್ತು 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಡಿಸೆಂಬರ್ 19,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನುಯ ಸಲ್ಲಿಸಬಹುದು.
ವೇತನದ ವಿವರ:
ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಆಯುರ್ವೇದಿಕ್ ಸೈನ್ಸ್ (ಸಿಸಿಆರ್ಎಎಸ್)ನ ಅಧಿಕೃತ ವೆಬ್‌ಸೈಟ್ https://admission-delhi.nielit.gov.in/frmMain.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 19,2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.