CEDOK: ವಿವಿಧ 4 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) 4 ಸಹಾಯಕ ತರಬೇತಿ ಅಧಿಕಾರಿ,
ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಹೈದರಾಬಾದ್ ಕರ್ನಾಟಕ ಪ್ರದೇಶ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಿಡಾಕ್ ನೇಮಕಾತಿ..ಏ.4ರೊಳಗೆ ಅರ್ಜಿ ಹಾಕಿ

ಹುದ್ದೆಗಳ ಹೆಸರು:

ಸಹಾಯಕ ತರಬೇತಿ ಅಧಿಕಾರಿ
ಕಿರಿಯ ಕಾರ್ಯನಿರ್ವಾಹಕರು
ಸಹಾಯಕರು

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸಹಾಯಕ ತರಬೇತಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂ,
ಕಿರಿಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 67,550/-ರೂ ಮತ್ತು
ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,350/ -ರಿಂದ 58,250/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಪ.ಜಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಎಸ್‌.ಸಿ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಂತರ್ಜಾಲದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪ್ರಕಾರ ಅರ್ಜಿ ಸಲ್ಲಿಸಬೇಕು ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏಪ್ರಿಲ್ 4,2020ಕ್ಕಿಂತ ಮೊದಲು ಅಥವಾ ಅಂದು ಕಛೇರಿ ಮುಚ್ಚುವ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
ನಿರ್ದೇಶಕರು,
ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್),
ಪ್ಲಾಟ್ ನಂ.೧ (ಎ ಮತ್ತು ಬಿ),
ಬೇಲೂರು ಕೈಗಾರಿಕಾ ಪ್ರದೇಶ,
ಬೆಳಗಾವಿ ರಸ್ತೆ,
ಧಾರವಾಡ -580011.

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಅಧಿಕೃತ ವೆಬ್‌ಸೈಟ್: https://cedokdwd.in/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CEDOK recruitment 2020 notification has been released on official website for the recruitment of 4 various posts. candidates can apply before 4th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X