ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) 4 ಸಹಾಯಕ ತರಬೇತಿ ಅಧಿಕಾರಿ, ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಹೈದರಾಬಾದ್ ಕರ್ನಾಟಕ ಪ್ರದೇಶ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ವಿಸ್ತರಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 28,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
CEDOK ನೇಮಕಾತಿ 2021 ಖಾಲಿ ಹುದ್ದೆಗಳು:
ಸಹಾಯಕ ತರಬೇತಿ ಅಧಿಕಾರಿ - 1 ಹುದ್ದೆ
ಕಿರಿಯ ಕಾರ್ಯನಿರ್ವಾಹಕರು - 1 ಹುದ್ದೆ
ಸಹಾಯಕರು - 2 ಹುದ್ದೆಗಳು
ಒಟ್ಟು 4 ಹುದ್ದೆಗಳು
CEDOK ನೇಮಕಾತಿ 2021 ವಿದ್ಯಾರ್ಹತೆ :
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ನೇಮಕಾತಿಯ ಸಹಾಯಕ ತರಬೇತಿ ಅಧಿಕಾರಿ, ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
CEDOK ನೇಮಕಾತಿ 2021 ವಯೋಮಿತಿ :
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ನೇಮಕಾತಿಯ ಸಹಾಯಕ ತರಬೇತಿ ಅಧಿಕಾರಿ, ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಪ.ಜಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
CEDOK ನೇಮಕಾತಿ 2021 ವೇತನ :
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ನೇಮಕಾತಿಯ ಸಹಾಯಕ ತರಬೇತಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂ, ಕಿರಿಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 67,550/-ರೂ ಮತ್ತು ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,350/ -ರಿಂದ 58,250/-ರೂ ವೇತನವನ್ನು ನೀಡಲಾಗುವುದು.
CEDOK ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ನೇಮಕಾತಿಯ ಸಹಾಯಕ ತರಬೇತಿ ಅಧಿಕಾರಿ, ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
CEDOK ನೇಮಕಾತಿ 2021 ಅರ್ಜಿ ಶುಲ್ಕ :
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ನೇಮಕಾತಿಯ ಸಹಾಯಕ ತರಬೇತಿ ಅಧಿಕಾರಿ, ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಎಸ್.ಸಿ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.
CEDOK ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ನೇಮಕಾತಿಯ ಸಹಾಯಕ ತರಬೇತಿ ಅಧಿಕಾರಿ, ಕಿರಿಯ ಕಾರ್ಯನಿರ್ವಾಹಕರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cedokdwd.karnataka.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 28,2021ಕ್ಕಿಂತ ಮೊದಲು ಅಥವಾ ಅಂದು ಕಛೇರಿ ಮುಚ್ಚುವ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಚೇರಿ ವಿಳಾಸ: ನಿರ್ದೇಶಕರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಪ್ಲಾಟ್ ನಂ.1 (ಎ ಮತ್ತು ಬಿ), ಬೇಲೂರು ಕೈಗಾರಿಕಾ ಪ್ರದೇಶ, ಬೆಳಗಾವಿ ರಸ್ತೆ, ಧಾರವಾಡ -580011.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











