ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 74 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಅಧಿಸೂಚನೆಯನ್ನು ಓದಬಹುದು.ಅರ್ಹತೆಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 21,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಅಧಿಕಾರಿ |
| Organisation | ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ |
| Educational Qualification | ಪದವಿ,ಎಂಬಿಎ,ಬಿ.ಟೆಕ್/ಎಂಸಿಎ,ಸಿಎ ಮತ್ತು ಪೋಸ್ಟ್ ಗ್ರಾಜುಯೇಟ್ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 23,700/- ರಿಂಧ 59,170/-ರೂ |
| Application Start Date | October 30, 2019 |
| Application End Date | November 21, 2019 |
ವಿದ್ಯಾರ್ಹತೆ:
ಪದವಿ,ಎಂಬಿಎ,ಬಿ.ಟೆಕ್/ಎಂಸಿಎ,ಸಿಎ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯತಕ್ಕದ್ದು.
ವೇತನದ ವಿವರ:
ಅಧಿಕಾರಿ ಹುದ್ದೆಗಳಿಗೆ ಆಯ್ಜೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂಧ 59,170/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕದ ವಿವರ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 550/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತರು ಆನ್‌ಲೈನ್‌ನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.centralbank.net.in/jsp/startMain.jsp# ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 21,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











