Central Bank Of India Recruitment 2021 : 115 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 115 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 23,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 17,2021 ರಂದು ಕೊನೆಗೊಳ್ಳುತ್ತದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 115 ಹುದ್ದೆಗಳ ನೇಮಕಾತಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಪಿಹೆಚ್‌.ಡಿ, ಸಿಎ/ಐಸಿಡಬ್ಲ್ಯೂಎ/ಎಂಬಿಎ, ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್/ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021 ವಯೋಮಿತಿ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 20 ರಿಂದ ಗರಿಷ್ಟ 45 ವರ್ಷ ವಯಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಮತ್ತು ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021 ವೇತನ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 1,00,350/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021 ಅರ್ಜಿ ಶುಲ್ಕ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 850/- ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://inb.centralbank.net.in/#/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 23,2021 ರಿಂದ ಡಿಸೆಂಬರ್ 17,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Central bank of india recruitment 2021 notification has been released for 115 specialist officer posts. Apply online before December 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+