Central University Of Karnataka Recruitment 2019 : 59 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಖಾಲಿ ಇರುವ 59 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ ಏನಿರಬೇಕು ? :

ವಿದ್ಯಾರ್ಹತೆ ಏನಿರಬೇಕು ? :

ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಿಂದ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರಬೇಕು ಹಾಗೂ 10+2 / ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಪಡೆದ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಖಾಲಿ ಹುದ್ದೆ ಮತ್ತು ವೇತನದ ವಿವರ :

ಖಾಲಿ ಹುದ್ದೆ ಮತ್ತು ವೇತನದ ವಿವರ :

ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ವೇತನದ ವಿವರವನ್ನು ತಿಳಿಯಲು ಮೇಲಿನ ದೃಶ್ಯವನ್ನು ಗಮನಿಸಬಹುದು.

ಅರ್ಜಿ ಶುಲ್ಕ ಎಷ್ಟು ? :

ಅರ್ಜಿ ಶುಲ್ಕ ಎಷ್ಟು ? :

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ / ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

 

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್‌ಸೈಟ್‌ https://www.cuk.ac.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಕ ಅಕ್ಟೋಬರ್ 5,2019ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CUK recruitment 2019 notification has been released on official website for the recruitment of 59 non teaching posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+