Central University Of Karnataka Recruitment 2019: 67 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು 67 ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 67 ಬೋಧಕ ಹುದ್ದೆಗಳ ನೇಮಕಾತಿ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 1,2019 ರಿಂದ ಅಕ್ಟೋಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ? :

ವಿದ್ಯಾರ್ಹತೆ ಏನಿರಬೇಕು ? :

ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪಿ.ಹೆಚ್‌ಡಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಪಡೆದ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಖಾಲಿ ಹುದ್ದೆ ಮತ್ತು ವೇತನದ ವಿವರ:

ಖಾಲಿ ಹುದ್ದೆ ಮತ್ತು ವೇತನದ ವಿವರ:

20 ಪ್ರೊಫೆಸರ್ ಮತ್ತು 47ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ ಎಷ್ಟು ? :

ಅರ್ಜಿ ಶುಲ್ಕ ಎಷ್ಟು ? :

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1,500/ - ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅಕ್ಟೋಬರ್ 1,2019

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 25,2019
ಅರ್ಜಿ ಪ್ರತಿಯನ್ನು ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 4,2019

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ https://www.cuk.ac.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಕ ಅಕ್ಟೋಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಪ್ರಿಂಟೌಟ್‌ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನವೆಂಬರ್ 4,2019ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
CUK Recruitment 2019-20: Apply Online for 67 Faculty Vacancies. Central University of Karnataka (CUK) invited Online applications from eligible and interested candidates to fill up Faculty Posts through CUK official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X