ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ 135 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 16,2022 ರಿಂದ ಜೂನ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

CESC Mysore ನೇಮಕಾತಿ 2022 ವಿದ್ಯಾರ್ಹತೆ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
CESC Mysore ನೇಮಕಾತಿ 2022 ವಯೋಮಿತಿ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
CESC Mysore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CESC Mysore ನೇಮಕಾತಿ 2022 ವೇತನ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
CESC Mysore ನೇಮಕಾತಿ 2022 ಅರ್ಜಿ ಶುಲ್ಕ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
CESC Mysore ನೇಮಕಾತಿ 2022 ಅರ್ಜಿ ಸಲ್ಲಿಕೆ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cescmysore.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 16,2022 ರಿಂದ ಜೂನ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications