ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್) ನೇಮಕಾತಿ 110 ಜ್ಯೂನಿಯರ್ ಆಫೀಸರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 18,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಜ್ಯೂನಿಯರ್ ಆಫೀಸರ್ ಮತ್ತು ಸೀನಿಯರ್ ಮ್ಯಾನೇಜರ್ |
| Organisation | ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್) |
| Educational Qualification | ಪದವಿ ಮತ್ತು ಬ್ಯಾಂಕ್ ಕೆಲಸದಿಂದ ನಿವೃತ್ತಿ ಹೊಂದಿದ ಅಭ್ಯರ್ಥಿಗಳು |
| Job Location | ಭಾರತದೆಲ್ಲೆಡೆ |
| Salary Scale | ಜ್ಯೂನಿಯರ್ ಆಫೀಸರ್ - ತಿಂಗಳಿಗೆ 16,000/-ರೂ ಮತ್ತು ಸೀನಿಯರ್ ಮ್ಯಾನೇಜರ್ - ತಿಂಗಳಿಗೆ 35,000/-ರೂ |
| Application Start Date | May 8, 2019 |
| Application End Date | May 18, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಜ್ಯೂನಿಯರ್ ಆಫೀಸರ್ ಹುದ್ದೆಗಳಿಗೆ ಪದವಿ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಬ್ಯಾಂಕ್ ನಲ್ಲಿ ಅಧಿಕಾರಿ ಕೆಲಸದಿಂದ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಜ್ಯೂನಿಯರ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/-ರೂ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 100/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.canfinhomes.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಆರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











