ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್ಹೆಚ್ಎಲ್) ನೇಮಕಾತಿ 30 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 18,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಮ್ಯಾನೇಜರ್ |
Organisation | ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್ಹೆಚ್ಎಲ್) |
Educational Qualification | ಪದವಿ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 28,000/- ರಿಂದ 43,450/-ರೂ |
Application Start Date | May 8, 2019 |
Application End Date | May 15, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಮ್ಯಾನೇಜರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿಯ ವಿವರ:
ಜೂನ್ 1,2019ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/- ರಿಂದ 43,450/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 100/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.canfinhomes.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್ಲೈನ್ ಮೂಲಕ ಆರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ