CFHL Recruitment 2019: ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್‌) ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿಎಫ್‌ಹೆಚ್‌ಎಲ್‌ ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಧಿಕಾರಿ ಮತ್ತು ವ್ಯವಸ್ಥಾಪಕ
Organisation ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್‌)
Educational Qualification ಬಿ.ಇ/ಬಿ.ಟೆಕ್ ಅಥವಾ ಎಂ.ಟೆಕ್
Job Location ಭಾರತದೆಲ್ಲೆಡೆ
Salary Scale ಅಧಿಕಾರಿ -ತಿಂಗಳಿಗೆ 37,913/- ರೂ, ವ್ಯವಸ್ಥಾಪಕ -ತಿಂಗಳಿಗೆ 59,172/-ರೂ
Application Start Date September 18, 2019
Application End Date September 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು
ವೃತ್ತಿಯಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿಯ ವಿವರ:

ಸೆಪ್ಟೆಂಬರ್ 1,2019ರ ಅನ್ವಯ ಅಧಿಕಾರಿ ಹುದ್ದೆಗಳಿಗೆ ಕನಿಷ್ಟ 24 ರಿಂದ ಗರಿಷ್ಟ 27 ವರ್ಷ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 28 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,913/- ರೂ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 59,172/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.canfinhomes.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಸೆಪ್ಟೆಂಬರ್ 20,2019ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
CFHL recruitment 2019 notification has been released for the recruitment of officer and manager posts and ivited applications from interested candidates.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+