ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್) ದೇಶದೆಲ್ಲೆಡೆ ಖಾಲಿ ಇರುವ ಶಾಖಾ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಯುಜಿಸಿ ಯಿಂದ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಡಿಸೆಂಬರ್ 1,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಶಾಖಾ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 64,985/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.canfinhomes.com/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 4,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











