ಸಿಎಸ್ಐಆರ್-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯವು (ಸಿಎಫ್‌ಟಿಆರ್‌ಐ) 31 ವಿಜ್ಞಾನಿ, ಹಿರಿಯ ವಿಜ್ಞಾನಿ ಮತ್ತು ಪ್ರಧಾನ ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ವಿಜ್ಞಾನಿ, ಹಿರಿಯ ವಿಜ್ಞಾನಿ, ಪ್ರಧಾನ ವಿಜ್ಞಾನಿ |
| Organisation | ಸಿಎಸ್ಐಆರ್-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) |
| Educational Qualification | ಡಿಪ್ಲೋಮಾ, ಪಿಹೆಚ್.ಡಿ, ಎಂ.ಇ, ಎಂ.ಟೆಕ್, ಬಿ.ಇ/ಬಿ.ಟೆಕ್,ಎಂ.ಎಸ್ಸಿ ಮತ್ತು ಎಂಬಿಎ |
| Job Location | ಮೈಸೂರು (ಕರ್ನಾಟಕ) |
| Salary Scale | ವಿಜ್ಞಾನಿ -ತಿಂಗಳಿಗೆ 94,253/-ರೂ, ಹಿರಿಯ ವಿಜ್ಞಾನಿ -ತಿಂಗಳಿಗೆ 1,09,016/-ರೂ ಮತ್ತು ಪ್ರಧಾನ ವಿಜ್ಞಾನಿ -ತಿಂಗಳಿಗೆ 1,67,935/-ರೂ |
| Application Start Date | January 8, 2020 |
| Application End Date | February 6, 2020 |
ಶೈಕ್ಷಣಿಕ ವಿದ್ಯಾರ್ಹತೆ:
ವಿಜ್ಞಾನಿ, ಹಿರಿಯ ವಿಜ್ಞಾನಿ ಮತ್ತು ಪ್ರಧಾನ ವಿಜ್ಞಾನಿ ಡಿಪ್ಲೋಮಾ, ಪಿಹೆಚ್.ಡಿ, ಎಂ.ಇ, ಎಂ.ಟೆಕ್, ಬಿ.ಇ/ಬಿ.ಟೆಕ್,ಎಂ.ಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಫೆಬ್ರವರಿ 6,2020ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 32, 37 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ವೇತನದ ವಿವರ:
ವಿಜ್ಞಾನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 94,253/-ರೂ, ಹಿರಿಯ ವಿಜ್ಞಾನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,09,016/-ರೂ ಮತ್ತು ಪ್ರಧಾನ ವಿಜ್ಞಾನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,67,935/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸಿಎಸ್ಐಆರ್-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ಅಧಿಕೃತ ವೆಬ್‌ಸೈಟ್ https://www.cftri.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 6,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅದಕ್ಕೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 21,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ನೇಮಕಾತಿ ವಿಭಾಗ,
ಸಿಎಸ್‌ಐಆರ್-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ),
ಚೆಲುವಾಂಬ ಮ್ಯಾನ್ಷನ್,
ಮೈಸೂರು-570020,
ಕರ್ನಾಟಕ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











