Chamarjanagar District Court Recruitment 2022 : 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 3 ಶೀಘ್ರಲಿಪಿಗಾರ, 2 ಬೆರಳಚ್ಚುಗಾರ ಮತ್ತು 4 ಬೆರಳಚ್ಚು ನಕಲುಗಾರ, 6 ಆದೇಶ ಜಾರಿಕಾರ ಮತ್ತು 12 ಸೇವಕ ಸೇರಿದಂತೆ ಒಟ್ಟು 26 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 12,2022 ರಿಂದ ಏಪ್ರಿಲ್ 10,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಚಾಮರಾಜನಗರ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಏ.10ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ :

ಶೀಘ್ರಲಿಪಿಗಾರ - 3 ಹುದ್ದೆಗಳು
ಬೆರಳಚ್ಚುಗಾರರು - 2 ಹುದ್ದೆಗಳು
ಬೆರಳಚ್ಚು ನಕಲುಗಾರರು - 4 ಹುದ್ದೆಗಳು
ಆದೇಶ ಜಾರಿಕಾರ - 6 ಹುದ್ದೆಗಳು
ಸೇವಕ - 12 ಹುದ್ದೆಗಳು
ಒಟ್ಟು 26 ಹುದ್ದೆಗಳು

ವಿದ್ಯಾರ್ಹತೆ :

ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಹುದ್ದೆಗಳ ಹೆಸರು - ವೇತನ (ತಿಂಗಳಿಗೆ)
ಶೀಘ್ರಲಿಪಿಗಾರ ಹುದ್ದೆಗಳಿಗೆ - 27,650/- ರಿಂದ 52,650/-ರೂ
ಬೆರಳಚ್ಚುಗಾರ ಹುದ್ದೆಗಳಿಗೆ - 21,400/- ರಿಂದ 42,000/-ರೂ
ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - 21,400/- ರಿಂದ 42,000/-ರೂ
ಆದೇಶ ಜಾರಿಕಾರ ಹುದ್ದೆಗಳಿಗೆ - 19,950/- ರಿಂದ 37,900/-ರೂ
ಸೇವಕರು ಹುದ್ದೆಗಳಿಗೆ - 17,000/- ರಿಂದ 28,950/-ರೂ

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸೇವಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕ :

ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/online-recruitment-chamarajanagar ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಏಪ್ರಿಲ್ 11,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/online-recruitment-chamarajanagar ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 12,2022 ರಿಂದ ಏಪ್ರಿಲ್ 10,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
District court of chamarajanagar recruitment 2022 notification has been released for 26 stenographer, typist and typist copyist posts. Interested candidates can apply before April 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+