ಜಿಲ್ಲಾ ಪಂಚಾಯತ್, ಚಾಮರಾಜನಗರ ಇಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಲೆಕ್ಕ ವ್ಯವಸ್ಥಾಪಕರು ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ತಾಲ್ಲೂಕು ಎಂ.ಐ.ಎಸ್ ಸಂಯೋಜಕರು ತಾಲ್ಲೂಕು ಐ,ಇ,ಸಿ ಸಂಯೋಜಕರು ಮತ್ತು ತಾಂತ್ರಿಕ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 20,2020 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಲೆಕ್ಕ ವ್ಯವಸ್ಥಾಪಕರು ಹುದ್ದೆಗಳಿಗೆ ಎಂ.ಕಾಂ/ಎಂಬಿಎ ಅಥವಾ ಫಿನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ, ತಾಲ್ಲೂಕು ಎಂ.ಐ.ಎಸ್ ಸಂಯೋಜಕರು ಹುದ್ದೆಗಳಿಗೆ ಬಿ.ಇ/ ಬಿ.ಎಸ್ಸಿ ವಿದ್ಯಾರ್ಹತೆ, ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಎಂಎ (ಸಮೂಹ ಸಂವಹನ) (ಪತ್ರಿಕೋದ್ಯಮ) ವಿದ್ಯಾರ್ಹತೆ ಮತ್ತು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಬಿಇ (ಸಿವಿಲ್) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಟ 2 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅಕ್ಟೋಬರ್ 20,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಲೆಕ್ಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ, ತಾಲ್ಲೂಕು ಎಂ.ಐ.ಎಸ್ ಸಂಯೋಜಕರು ಮತ್ತು ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ಮತ್ತು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://chamrajnagar.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











