ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 8 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 8 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ಸಂಬಳ ಮತ್ತು ಇನ್ನಿತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ..ಫೆ.10ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಚಿಕ್ಕಬಳ್ಳಾಪುರ ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 27,650/- ರಿಂದ 52,650/-ರೂ
Application Start Date January 10, 2020
Application End Date February 10, 2020

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ:

ಫೆಬ್ರವರಿ 10,2020ರ ಅನ್ವಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ ತಲಾ 05 ನಿಮಿಷಗಳ ಕನ್ನಡ ಮತ್ತು ಇಂಗ್ಲೀಷ್ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು 45 ನಿಮಿಷಗಳಲ್ಲಿ ಬೆರಳಚ್ಚು ಮಾಡತಕ್ಕದ್ದು.

ಅರ್ಹತಾ ಪರೀಕ್ಷೆಗಳು ಗರಿಷ್ಟ 100 ಅಂಕಗಳನ್ನು ಹೊಂದಿದ್ದು, ಉತ್ತೀರ್ಣರಾಗಲು ಕನಿಷ್ಟ 50 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ,ಪ್ರವರ್ಗ- 1,2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ100/-ರೂ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ50/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/chikballapur-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ಫೆಬ್ರವರಿ 11,2020 ಕಡೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://districts.ecourts.gov.in/karnataka ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 10,2020ರ ರಾತ್ರಿ 11:59 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of chikballapur recruitment 2020 notification has been released on official website for the recruitment of 8 stenographer posts. Interested candidates can apply through online before 10th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+