ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 11 ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎಸ್‌ಎಸ್‌ಎಲ್‌ಸಿ ಪಾಸ್? ಹಾಗಿದ್ರೆ ಈ ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ಸಂಬಳ ಮತ್ತು ಇನ್ನಿತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಆದೇಶ ಜಾರಿಕಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್‌ಎಸ್‌ಎಲ್‌ಸಿ
Job Location ಚಿಕ್ಕಬಳ್ಳಾಪುರ (ಕರ್ನಾಟಕ)
Salary Scale ತಿಂಗಳಿಗೆ 19,950/- ರಿಂದ 37,900/-ರೂ
Application Start Date January 10, 2020
Application End Date February 10, 2020

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಲಘು/ಭಾರೀ ವಾಹನಾ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನ:

ಆದೇಶ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,950/- ರಿಂದ 37,900/-ರೂ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಆದೇಶ ಜಾರಿಕಾರ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ,ಪ್ರವರ್ಗ- 1,2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ100/-ರೂ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ50/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/chikballapur-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ಫೆಬ್ರವರಿ 11,2020 ಕಡೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://districts.ecourts.gov.in/karnataka ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 10,2020ರ ರಾತ್ರಿ 11:59 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District Court of chikkaballapur recruitment 2020 notification has been released on official website for the recruitment of 11 Process server Posts.Interested candidates can apply through online before 10th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X