ಚಿಕ್ಕಮಗಳೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 50 ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 50 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

50 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ….ಮಾ.20ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಜಿಲ್ಲಾ ಕಂದಾಯ ಘಟಕ
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ
Job Location ಚಿಕ್ಕಮಗಳೂರು ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 21,400/- ರಿಂದ 42,000/-ರೂ ವೇತನ
Application Start Date February 18, 2020
Application End Date March 20, 2020

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಗ್ರಾಮಲೆಕ್ಕಿಗ ಹುದ್ದೆಗಳಿಗೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 300/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ
ಅಂಚೆ ಕಛೇರಿಯ ಮೂಲಕ ಮಾರ್ಚ್ 24,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಚಿಕ್ಕಮಗಳೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://chikkamagaluru.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Chikkamagaluru District revenue department recruitment 2020 notification has been released on official website for the recruitment of 50 village accountant posts. Interested candidates can apply through online before 20th march 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+