ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಯಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಅಜ್ಜಂಪುರ, ಚಿಕ್ಕಮಗಳೂರು, ಕಡೂರು, ಮೂಡಿಗೆ, ನರಸಿಂಹರಾಜಪುರ ಮತ್ತು ತರಿಕೆರೆ ತಾಲ್ಲೂಕುಗಳಲ್ಲಿ 2020-21ನೇ ಸಾಲಿನಲ್ಲಿ "ಗ್ರಾಮ ಕಾಯಕ ಮಿತ್ರ" ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 9ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಕನಿಷ್ಟ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಕೆ:
ಅರ್ಜಿಯು ಅಧಿಕೃತ ವೆಬ್‌ಸೈಟ್ https://chikkamagaluru.nic.in/ ನಲ್ಲಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿರುತ್ತದೆ. ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 9,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ನೇರವಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಸಲ್ಲಿಸುವುದು.
ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











