Chikkamagaluru Zilla Panchayat Recruitment 2021: ತಾಂತ್ರಿಕ ಸಹಾಯಕರು ಮತ್ತು ಸಂಯೋಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ತಾಂತ್ರಿಕ ಸಹಾಯಕ ಮತ್ತು ಸಂಯೋಜಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ/ಹೊಸದಾಗಿ ಮಂಜೂರಾಗಿರುವ ತಾಂತ್ರಿಕ ಸಹಾಯಕರು ಮತ್ತು ತಾಂತ್ರಿಕ ಸಂಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 19ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿ.ಇ ಅಥವಾ ಬಿ.ಟೆಕ್, ಡಿಪ್ಲೋಮಾ, ಬಿ.ಎಸ್ಸಿ ಅಥವಾ ಸಮಾನಾಂತರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಗರಿಷ್ಟ 40 ವರ್ಷ, ತಾಂತ್ರಿಕ ಸಹಾಯಕರು (ಸಿವಿಲ್) ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ಮತ್ತು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://chikkamagaluru.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Chikkamagaluru zilla panchayat recruitment 2021 notification has been released for technical assistant and technical coordinator posts. Interested candidates can apply before july 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+