Chikkamagaluru Zilla Panchayat Recruitment 2022 : ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಇ-ಪಂಚಾಯತ್ ಯೋಜನೆಯಡಿ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 2,2022 ರಿಂದ ಮಾರ್ಚ್ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

Chikkamagaluru Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಎಸ್ಸಿ/ಬಿಸಿಎ/ಬಿಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

Chikkamagaluru Zilla Panchayat ನೇಮಕಾತಿ 2022 ವಯೋಮಿತಿ :

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಗರಿಷ್ಟಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Chikkamagaluru Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Chikkamagaluru Zilla Panchayat ನೇಮಕಾತಿ 2022 ವೇತನ :

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

Chikkamagaluru Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 

Chikkamagaluru Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://chikkamagaluru.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 2,2022 ರಿಂದ ಮಾರ್ಚ್ 10,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Chikkamagaluru zilla panchayat recruitment 2022 notification has been released for district planning manager post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X