ಚಿತ್ರದುರ್ಗ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರ ಮತ್ತು ಜವಾನರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಪಡೆದು ಅಕ್ಟೋಬರ್ 28 ರೊಳಗೆ ಸಲ್ಲಿಸತಕ್ಕದ್ದು

ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರ ಮತ್ತು ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಪಡೆದು ಅಕ್ಟೋಬರ್ 28 ರೊಳಗೆ ಸಲ್ಲಿಸತಕ್ಕದ್ದು

ಬಿಇಎಲ್: ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಬಿಇಎಲ್: ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಚಿತ್ರದುರ್ಗ ನ್ಯಾಯಾಲಯದಲ್ಲಿ ನೇಮಕಾತಿ

ಹುದ್ದೆಗಳ ವಿವರ

ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 03
ವೇತನ ಶ್ರೇಣಿ: ರೂ.14550-26700/-

ವಿದ್ಯಾರ್ಹತೆ

  • ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
  • ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಜವಾನರು: 10

ವೇತನ ಶ್ರೇಣಿ: ರೂ.9600-14550/-

ವಿದ್ಯಾರ್ಹತೆ

  • ಏಳನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
  • ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರೆಯಲು ಬರಬೇಕು
  • ಏಳನೇ ತರಗತಿ ಗ್ರೇಡ್ ಅಂಕಪಟ್ಟಿ ಪರಿಗಣಿಸಲಾಗುವುದಿಲ್ಲ. ಏಳನೇ ತರಗತಿ ಅಂಕಪಟ್ಟಿಯಲ್ಲಿ ನಿಗದಿ ಪಡಿಸಿದ ಗರಿಷ್ಠ ಅಂಕ ಹಾಗೂ ಅಭ್ಯರ್ಥಿ ಗಳಿಸಿರುವ ಅಂಕಗಳು ಸ್ಪಷ್ಟವಾಗಿ ನಮೂದಿಸಿರತಕ್ಕದ್ದು.
  • ಗ್ರೇಡ್ ಅಂಕಪಟ್ಟಿಯೊಂದಿಗೆ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆಯ್ಕೆ ವಿಧಾನ

ಜವಾನರ ಹುದ್ದೆಗೆ ಏಳನೇ ತರಗತಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ೦೧ ಹುದ್ದೆಗೆ ೧೦ ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆಗೆ ತೊಡಗಿಸಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವಯೋಮಿತಿ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 18 ರಿಂದ 38
  • ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ

ಅರ್ಜಿ ಸಲ್ಲಿಕೆ

ಅರ್ಜಿ ನಮೂನೆಯನ್ನು ವೆಬ್ಸೈಟ್ ಮೂಲಕ ಪಡೆದು ಎಲ್ಲಾ ಅಂಕಣವನ್ನು ಭರ್ತಿ ಮಾಡುವುದು, ಇತ್ತೀಚಿನ ಭಾವಚಿತ್ರದೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಚಿತ್ರದುರ್ಗ ಇವರಿಗೆ ನಿಗದಿತ ದಿನಾಂಕದೊಳಗೆ ಕಳುಹಿಸುವುದು.

ಅರ್ಜಿ ಸಲ್ಲಿಸಲಿ ಕೊನೆಯ ದಿನಾಂಕ: 28-10-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Chitradurga District and session court invites applications from eligible candidates for the posts of stenographers and peons.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X