ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ಚಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 10,2021 ಕೊನೆಯ ದಿನವಾಗಿರುತ್ತದೆ.

ವಿದ್ಯಾರ್ಹತೆ:
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವೇತನ:
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://chitradurga.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 10,2021ರೊಳಗೆ ಪಿ.ಡಿ.ಒ/ಪಂಚಾಯ್ತಿ ಕಾರ್ಯದರ್ಶಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











