ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಲಾಂಗ್ವೇಜಸ್ (ಸಿಐಐಎಲ್) 15 ಅಸೋಸಿಯೇಟ್ ಫೆಲೋ ಮತ್ತು ಸೀನಿಯರ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸದರಿ ಹುದ್ದೆಗಳು ಮೈಸೂರಿನಲ್ಲಿ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಅಸೋಸಿಯೇಟ್ ಫೆಲೋ ಮತ್ತು ಸೀನಿಯರ್ ಫೆಲೋ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಸೀನಿಯರ್ ಫೆಲೋ ಹುದ್ದೆಗಳಿಗೆ ಗರಿಷ್ಟ 60 ವರ್ಷ ಮತ್ತು ಅಸೋಸಿಯೇಟ್ ಫೆಲೋ ಹುದ್ದೆಗಳಿಗೆ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಸೀನಿಯರ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,000/-ರೂ ಮತ್ತು ಅಸೋಸಿಯೇಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮತ್ತು ಸಾಫ್ಟ್ ಕಾಪಿಯನ್ನು ada-iilmys@gov,in ವಿಳಾಸಕ್ಕೆ ಅಧಿಸೂಚನೆ ಹೊರಡಿಸಿದ 21 ದಿನದೊಳಗಾಗಿ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The Director,
Central Institute of indian languages (CIIL),
Manasagangothri,
Hunsur Road,
Mysore-570006
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ