CIMS Recruitment 2021: 81 ಪ್ರಾಧ್ಯಾಪಕ ಮತ್ತು ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 81 ಹುದ್ದೆಗಳ ನೇಮಕಾತಿ

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಿಕ್ಕಮಗಳೂರು ಇಲ್ಲಿ ಖಾಲಿ ಇರುವ 81 ಪ್ರಾಧ್ಯಾಪಕರು, ಸೀನಿಯರ್ ರೆಸಿಡೆಂಟ್ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 50 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 53 ವರ್ಷ ಮತ್ತು ಪ.ಜಾ/ಪ.ಪಂಗಡ ಗರಿಷ್ಟ 55 ವರ್ಷದೊಳಗಿನ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 48 ವರ್ಷ ಮತ್ತು ಪ.ಜಾ/ಪ.ಪಂಗಡದ ಗರಿಷ್ಟ 50 ವರ್ಷದೊಳಗಿನ, ಸಹಾಯಕ ಪ್ರಾಧ್ಯಾಪಕ/ಸೀನಿಯರ್ ರೆಸಿಡೆಂಟ್/ಟ್ಯೂಟರ್ ಹುದ್ದೆಗಳಿಗೆ ಗರಿಷ್ಟ 38 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಗರಿಷ್ಟ 43 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರು ಜೂನ್ 21 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು 2000/-ರೂ ಅರ್ಜಿ ಶುಲ್ಕವನ್ನು ಜೂನ್ 14,2021ರ ಸಂಜೆ 5 ಗಂಟೆಯೊಳಗೆ ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cimschikkamagaluru.karnataka.gov.in/ ಮತ್ತು https://dme.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೂನ್ 14,2021ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಕಳುಹಿಸುವ ಮೂಲಕ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

ನಿರ್ದೇಶಕರು,

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ, ಆಜಾದ್ ಪಾರ್ಕ್ ಹತ್ತಿರ,
ಚಿಕ್ಕಮಗಳೂರು-577101.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CIMS Chikkamagaluru recruitment 2021 notification has been released for 81 professor, senior resident and tutor posts. Interested candidates can apply before June 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+